ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.28: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಳ್ಳೂರಿನ ನಿವಾಸಿ ಅರ್ನಾಲ್ಡ್‍ಡಿ ಸೋಜಾ(29) ಎಂದು ಗುರುತಿಸಲಾಗಿದೆ.


ಅರ್ನಾಲ್ಡ್ ಅವರು ಸುಮಾರು ಒಂದು ವರ್ಷದ ಹಿಂದೆ ಗಲ್ಫ್‍ನಿಂದ ಹಿಂದಿರುಗಿದ್ದು. ಕಾಪುವಿನ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ಹಿನ್ನೆಲೆ ತಮ್ಮ ಪಕ್ಕದ ಮನೆಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಊಟದ ನಂತರ ಕೊಠಡಿಗೆ ಹೋದವರು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top