ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ.
ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಲ್ಲಿ ಕೊರೊನಾ ವೈರಸ್ ಹೆಚ್ಚು ಇರುವ ಪಟ್ಟಿಯಲ್ಲಿ ದೇಶ 4ನೇ ಸ್ಥಾನದಲ್ಲಿದೆ.ಸತತ ಎರಡು ದಿನಗಳಿಂದ ರಾಜ್ಯದಲ್ಲಿ 5000 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಮಹಾರಾಷ್ಟ್ರ ಹೊರತುಪಡಿಸಿದರೆ ದೆಹಲಿಯಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 596 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಜುಲೈ 5ರಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

Also Read  ಅಗ್ನಿವೀರರಿಗೆ ರೈಲ್ವೆಯಿಂದ ಶೇ 15ರಷ್ಟು ಮೀಸಲಾತಿ.!

 

error: Content is protected !!
Scroll to Top