ಮಂಗಳೂರು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಗರಣ ಸೂಕ್ತ ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28:ವಿಶ್ವವಿದ್ಯಾಲಯದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಹಗರಣಗಳನ್ನು ವಿಚಾರಣೆ ನಡೆಸಿ ತನಿಖೆ ಮಾಡಬೇಕೆಂದು ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯಾಂಗ ಸಮಿತಿಯನ್ನು ರಚಿಸಿ ನಿಷ್ಪಕ್ಷಪಾತ ತನಿಖೆ ಮಾಡಿ ನಿಗದಿತ ಅವಧಿಯಲ್ಲಿ ವರದಿಯನ್ನು ಪಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಎಬಿವಿಪಿ ವಿವಿ ಕುಲಪತಿಗಳಿಗೆ ಮನವಿ ಮಾಡಿದೆ.


ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್ ರೋಶನಿ ನಿಲಯ ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿದ್ದು ಆದರೆ ಇಲ್ಲಿಸ್ನಾತಕೋತ್ತರ ಅಧ್ಯಯನ ಮತ್ತು ಪಿಎಚ್‌ಡಿ ಕಾರ್ಯಕ್ರಮಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ವ್ಯವಹರಿಸಲಾಗಹುತ್ತಿದೆ ಎಂಬುದನ್ನು ವಿಶ್ವವಿದ್ಯಾಲಯದ ಕುಲಪತಿಗಳ ಗಮನಕ್ಕೆ ತರಲಾಯಿತು. ಅಲ್ಲದೇ ಪ್ರಸಕ್ತ ಪರಿಸ್ಥಿತಿಯಲ್ಲಿವಿಶ್ವವಿದ್ಯಾಲಯದ ಮುಂದಿನ ಯೋಜನೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕೆಂದು ಮನವಿ ಮಾಡಲಾಯಿತು.

error: Content is protected !!

Join the Group

Join WhatsApp Group