ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.28:  ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 

ಆಕಾಶವಾಣಿಯ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೊರೋನಾ ಸಂಕಷ್ಟದ ನಡುವೆ ಈ ವರ್ಷ ನಮ್ಮ ದೇಶ ಹಲವು ಸವಾಲುಗಳಿಗೆ ಎದುರಾಯಿತು, ಆಂಫಾನ್ ಚಂಡಮಾರುತ, ನಿಸರ್ಗ ಚಂಡಮಾರುತ, ಮಿಡತೆ ದಾಳಿ, ಅಲ್ಲಲ್ಲಿ ಸಣ್ಣ ಭೂಕಂಪಗಳು, ಹೀಗೆ ಇವೆಲ್ಲದರ ಮಧ್ಯೆ ನಮ್ಮ ನೆರೆ ದೇಶ ನೀಡುತ್ತಿರುವ ಕಿರುಕುಳ ವಿರುದ್ಧ ಸಹ ಹೋರಾಡಬೇಕಾಗಿದೆ. ಶಾಂತಿ ಕಾಪಾಡುವಲ್ಲಿ ಭಾರತದ ಬದ್ಧತೆ ಮತ್ತು ಶಕ್ತಿಯನ್ನು ಇಡೀ ಪ್ರಪಂಚ ನೋಡಿದೆ ಎಂದರು.

Also Read  ನೆಲ್ಯಾಡಿ: ಟ್ಯಾಂಕರ್ ಪಲ್ಟಿ - ಗ್ಯಾಸ್ ಸೋರಿಕೆ ➤ ಉಪ್ಪಿನಂಗಡಿ - ನೆಲ್ಯಾಡಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

 

ಕಳೆದ ಜೂನ್ 15ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಮಂದಿ ಯೋಧರಿಗೆ ಭಾರತ ಗೌರವ ನಮನ ಸಲ್ಲಿಸುತ್ತಿದೆ. ಅವರ ತ್ಯಾಗ, ಬಲಿದಾನವನ್ನು ಈ ದೇಶ ಮರೆಯುವುದಿಲ್ಲ ಎಂದು ಪ್ರಧಾನಿ ಹೇಳಿದರು.ಪೂರ್ವ ಲಡಾಕ್ ಸಂಘರ್ಷದ ಬಳಿಕ ಹಲವರು ಸ್ವದೇಶಿ ವಸ್ತುಗಳ ಮೊರೆ ಹೋಗುತ್ತಿದ್ದಾರೆ, ದೇಶಿ ವಸ್ತುಗಳ ಬಳಕೆಗೆ ಕರೆ ನೀಡುತ್ತಿದ್ದಾರೆ. ದೇಶದ ನೂರಾರು ಭಾಗಗಳಿಂದ ಅನೇಕ ಮಂದಿ ನನಗೆ ಸಂದೇಶಗಳನ್ನು ಕಳುಹಿಸುತ್ತಾರೆ, ಸ್ವಾವಲಂಬಿಗಳಾಗುವಲ್ಲಿ ಭಾರತೀಯರು ತೆಗೆದುಕೊಂಡಿರುವ ಈ ದಿಟ್ಟ ನಿರ್ಧಾರ ಶ್ಲಾಘನೀಯ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದರು.

 

Also Read  ಇಂದಿನಿಂದ ಕರಾವಳಿಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ರಜೆ ಘೋಷಣೆ

error: Content is protected !!
Scroll to Top