ಹಿರಿಯ ಸಾಹಿತಿ ಗೀತಾ ನಾಗಭೂಷಣ್ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಜೂ.29, ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಇಂದು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧರಾಗಿದ್ದಾರೆ.

ಅವರು ಕಲಬುರ್ಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇವರು ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿಯು ಹೌದು. 2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.
ಗೀತಾ ನಾಗಭೂಷಣ ಇವರ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ, ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇದೆ.

Also Read  ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ➤ ಜಿದ್ದಾ ಜಿದ್ದಿನ ಕಣದಲ್ಲಿ ಮಂಗಳಾ ಅಂಗಡಿ vs ಸತೀಶ್ ಜಾರಕಿಹೊಳಿ

error: Content is protected !!
Scroll to Top