ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ – News Kadaba

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ರವರನ್ನು ಭೀಕರವಾಗಿ ಕೊಲೆ ಮಾಡಿರುವಂತಹ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಕಡಬ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

 

ದಿಟ್ಟ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದ ಗೌರಿ ಲಂಕೇಶ್ ರವರನ್ನು ಗುಂಡು ಹಾರಿಸಿ ಭೀಕರವಾಗಿ ಕೊಲೆಗೈದ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಿರಂತರ ಹಲ್ಲೆಗಳಾಗುತ್ತಿರುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿಯನ್ನು ಕಡಬ ತಹಶಿಲ್ದಾರ್ ಜಾನ್ ಪ್ರಕಾಶ್ ರೊಡ್ರಿಗಸ್ ರವರ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಸ್. ಬಾಲಕೃಷ್ಣ ಕೊಯಿಲ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಎನ್.ಕೆ. ಸದಸ್ಯರಾದ ಖಾದರ್ ಸಾಹೇಬ್ ಕಲ್ಲುಗುಡ್ಡೆ, ತಸ್ಲೀಂ ಮರ್ಧಾಳ, ಉದಯ ಮರ್ಧಾಳ ಉಪಸ್ಥಿತರಿದ್ದರು.

Scroll to Top