ಕರಾವಳಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ ➤ ಉಳ್ಳಾಲದ ವೃದ್ಧೆ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ಕರಾವಳಿಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.ಮಂಗಳೂರಿನ ಉಳ್ಳಾಲ ನಿವಾಸಿ 60 ವರ್ಷದ ವೃದ್ದೆ ಸಾವನ್ನಪ್ಪಿದ್ದು ಕೊರೊನಾ ಸೋಂಕು ದೃಢಪಟ್ಟ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

 

ಅವರು ಲಿವರ್, ಡಯಾಬಿಟಿಸ್ ಮತ್ತು ಹೃದಯ ಖಾಯಿಲೆಯಿಂದಲೂ ಬಳಲುತ್ತಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಉಳ್ಳಾಲದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಸೋಂಕು ಪತ್ತೆಯಾದ ಪ್ರದೇಶದಲ್ಲಿ ಸಾಮೂಹಿಕವಾಗಿ ಕೊರೊನಾ ಪರೀಕ್ಷೆ ನಡೆಸಲು ಈಗಾಗಲೇ ನಿರ್ಧರಿಸಲಾಗಿದೆ.

Also Read  ಇಂದಿನ (ಡಿ.27) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

 

 

error: Content is protected !!