ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ರಾಜ್ಯದಲ್ಲಿ SSLC ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

 

 

ರಾಜ್ಯದಲ್ಲಿ SSLC ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು. ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ ಅಂತ್ಯಕ್ಕೆ ಹಾಗೂ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು. ಮಕ್ಕಳು‌ ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Also Read  ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

 

 

error: Content is protected !!
Scroll to Top