ತುಳುವರಿಗೆ ತುಳುವಿನಲಿ ಧನ್ಯವಾದ ಸಲ್ಲಿಸಿದ ಡಾ.ಪಿ.ಎಸ್.ಹರ್ಷಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.29 : ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಡಾ.ಪಿ.ಎಸ್.ಹರ್ಷಾ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡೋ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.


ಮಂಗಳೂರಿನ ಪ್ರೀತಿಯ ಬಂಧುಗಳೇ, ಕಳೆದ 11 ತಿಂಗಳಿನಿಂದ ಮಂಗಳೂರಿನ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ನನಗೆ ಇದೀಗ ವರ್ಗಾವಣೆ ಆಗಿದೆ. ಇಲಾಖೆಯ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ನನ್ನ ಕರ್ತವ್ಯ ಮಾಡಿಕೊಂಡು ಬಂದಿದ್ದೇನೆ.ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿ ಪೂರ್ವಕ ಅಭಿನಂದನೆಗಳು ಎಂದು ತುಳು ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.


ಐಪಿಎಸ್ ಹರ್ಷಾರನ್ನು ಬೆಂಗಳೂರಿನ ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ನೂತನ ಮಂಗಳೂರಿನ ಆಯುಕ್ತರಾಗಿ ಕಾರ್ಕಳದ ನಕ್ಸಲ್ ನಿಗ್ರಹ ಪಡೆಯ ಡಿಐಜಿ ವಿಕಾಸ್ ಕುಮಾರ್ ಅವರನ್ನು ವರ್ಗಾಯಿಸಲಾಗಿದೆ. ಹರ್ಷಾರವರು ಮಂಗಳೂರಿನ ಪೊಲೀಸ್ ಆಯುಕ್ತರಾದ ನಂತರ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು.

Also Read  ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ..! ➤ ಶಾಸಕ ಯು.ಟಿ ಖಾದರ್ ವಿರುದ್ಧ ದೂರು ದಾಖಲು

 

error: Content is protected !!
Scroll to Top