ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಬಾಗಲಕೋಟೆ, ಜೂ.29, ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಬಾಗಲಕೋಟೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಮೂವರು ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕಿಗೆ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ನವನಗರದಲ್ಲಿರುವ ಆದರ್ಶ ವಿದ್ಯಾಲಯದ ಬಾಹ್ಯ ಪರೀಕ್ಷಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಕ್ಷಕಿಯೇ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಗಂಟಲು ಮಾದರಿ ದ್ರವ ಪರೀಕ್ಷೆ ಮಾಡಿಸಿದ್ದು, ಈ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿರುವುದಾಗಿ ವರದಿಯಾಗಿದೆ.

Also Read  ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..!

error: Content is protected !!
Scroll to Top