ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.29, ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಶಿರ್ಲಾಲು ನಿವಾಸಿ ಚಂಚಲ ಎಂದು ಗುರುತಿಸಲಾಗಿದೆ. ಈಕೆ ಮದುವೆಯಾಗಿ ಒಂದು ಗಂಡು ಮಗು ಇದ್ದು, ಆಳದಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದರು. ಇಂದು ತನ್ನ ಬಾಡಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಸಹೋದರಿಯರು, ಪತಿ, ಗಂಡು ಮಗು ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ವೇಣೂರ್ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Scroll to Top