ಇಂದು ಕರಾವಳಿ ಮೀನುಗಾರಿಕೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರಾವಳಿ ಮೀನುಗಾರಿಕೆ ಕುರಿತು ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರಾವಳಿ ಭಾಗದ ಶಾಸಕರು, ವಿಷಯ ತಜ್ಞರು, ಮೀನುಗಾರ ಮುಖಂಡರು, ಇಲಾಖೆಯ ನಿವೃತ್ತ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ ಎಂದು ಮೀನುಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

Also Read  ಜೇಸಿಐ ನೆಕ್ಕಿಲಾಡಿ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ ► ಯುವ ಸಮೂಹವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸುವ ಕಾರ್ಯವಾಗಲಿ: ಸವಿತಾ ಪಿ.ಜಿ. ಭಟ್

error: Content is protected !!