(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.30: ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಜಿಲ್ಲಾ ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಶಂಕುಸ್ಥಾಪನೆ ಮಾಡಿದರು.
ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು ರಾಜ್ಯದ ಆರೋಗ್ಯ ಕ್ಷೇತ್ರಕ್ಕೆ ವೆನ್ಲಾಕ್ ಹಾಗೂ ಲೇಡಿಗೋಶನ್ ಮಹತ್ವದ ಸೇವೆ ನೀಡುತ್ತಿದೆ. ಜನ ಸಾಮಾನ್ಯರ ಪಾಲಿನ ಆರೋಗ್ಯ ಸಂಜೀವಿನಿಯಾಗಿರುವ ಈ ಆಸ್ಪತ್ರೆಗಳ ಅಭಿವೃದ್ದಿಯು ಸಾರ್ವಜನಿಕರಿಗೆ ಸರಕಾರ ನೀಡುತ್ತಿರುವ ಮಹತ್ವದ ಕೊಡುಗೆಯಾಗಿದೆ ಎಂದರು.
ಸ್ಮಾರ್ಟ್‍ಸಿಟಿ ಯೋಜನೆಯಡಿ ಈಗಾಗಲೆ ಒಂದು ಸಾವಿರ ಕೋಟಿಗೂ ಅಧಿಕ ಅಭಿವೃದ್ದಿ ಕಾಮಗಾರಿ ನಡೆಯುತ್ತಿವೆ ಎಂದು ತಿಳಿಸಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಸ್ಮಾರ್ಟ್‍ಸಿಟಿಯಿಂದ ವೆನ್ಲಾಕ್ ಮತ್ತು ಲೇಡಿಗೋಶನ್ ಆಸ್ಪತ್ರೆಯ ಅಭಿವೃದ್ದಿಗೆ 50 ಕೋ.ರೂಗಳಿಗೂ ಅಧಿಕ ವೆಚ್ಚ ಮಾಡಲಾಗುತ್ತಿದ್ದು ಈ ಆಸ್ಪತ್ರೆಗಳು ಹಲವು ವರ್ಷಗಳಿಂದ ಎದುರಿಸುತ್ತಿದ್ದ ಮೂಲಸೌಕರ್ಯಗಳ ಸಮಸ್ಯೆ ನಿವಾರಣೆಗೆ ಒತ್ತು ನಿಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ದಿವಾಕರ್,ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್.ಅಪರ ಜಿಲ್ಲಾಧಿಕಾರಿ ರೂಪ ಉಪಸ್ಥಿತರಿದ್ದರು.