ಇಂದು ಸಂಜೆ 4ಕ್ಕೆ ಮೋದಿ ಭಾಷಣ ➤ ಎಲ್ಲರ ಚಿತ್ತ ಪ್ರಧಾನಿಯತ್ತ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.30:  ಮಂಗಳವಾರ ಪ್ರಧಾನ ನರೇಂದ್ರ ಮೋದಿ ಅವರು ಮತ್ತೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಟ್ವಿಟರ್ ಖಾತೆ ಮಾಹಿತಿ ಹಂಚಿಕೊಂಡಿದ್ದು, ಸಂಜೆ 4 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. ಒಂದನೇ ಹಂತದ ಅನ್ಲಾಕ್ ಪ್ರಕ್ರಿಯೆಯ ದಿನ ಕೊನೆಗೊಳ್ಳುವ ದಿನದಂತೆ ಪ್ರಧಾನಿ ಮೋದಿ ಭಾಷಣ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಒಂದೇ ದಿನ 18584 ಪ್ರಕರಣಗಳು ದಾಖಲಾಗಿದ್ದು… 415 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,59,426 ಆಗಿದೆ. ಲಡಾಖ್ ಗಡಿಯಲ್ಲಿ ಚೀನಾ ಮತ್ತೆ ನರಿ ಬುದ್ಧಿ ಪ್ರದರರ್ಶಿಸುತ್ತಿದೆ.ಹೀಗಿರುವಾಗ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷದ ಕುರಿತಾಗಿಯೂ ಮೋದಿ ತಮ್ಮ ಭಾಷಣದಲ್ಲಿ ಮಾತನಾಡುವ ಸಾಧ್ಯತೆಗಳಿವೆ ಎಂದೂ ಹೇಳಲಾಗಿದೆ.

Also Read  ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ

 

error: Content is protected !!
Scroll to Top