ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 30, ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣವು ಒಂದು ಪೂರ್ಣ ಪ್ರಮಾಣದ ರಂಗ ರೆಪರ್ಟರಿಯಾಗಿರುತ್ತದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಪ್ರತಿವರ್ಷ ಹತ್ತು ತಿಂಗಳ ರಂಗಶಿಕ್ಷಣದಲ್ಲಿ ಡಿಪ್ಲೋಮಾ ಕೋರ್ಸ್ ಅನ್ನು ನಡೆಸುತ್ತಾ ಬಂದಿದೆ. ಪ್ರಸ್ತುತ 2020-21 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

2020-21ನೇ ಸಾಲಿನ ಈ ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗಧಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಆದರೆ 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ. 3,000 ಗಳ ವಿದ್ಯಾರ್ಥಿ ವೇತನ ಹಾಗೂ ಮಾಸಿಕ ರೂ. 2,000 ಗಳ ಊಟೋಪಚಾರದ ಭತ್ಯೆ ಪಾವತಿಸಲಾಗುತ್ತದೆ. ರಂಗಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳು ಜೂನ್ 25 ರಿಂದ ರಂಗಾಯಣದ ವೆಬ್‍ಸೈಟ್ www.rangayana.org ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಬಹುದು. ಅಥವಾ ರಂಗಾಯಣದ ಕಚೇರಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ರಂಗ ಕೈಪಿಡಿ ಸೇರಿ (ಸಾಮಾನ್ಯ ವರ್ಗ ರೂ. 200, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.150) ಡಿ.ಡಿ.ಯನ್ನು ಜಂಟಿ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು 570005 ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜುಲೈ 10 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು, ಅಥವಾ ಖುದ್ದಾಗಿ ರಂಗಾಯಣದ ಕಚೇರಿಗೆ ಜುಲೈ 10 ರ ಸಂಜೆ 5.30 ಗಂಟೆಯೊಳಗೆ ತಲುಪಿಸಬಹುದು. ಅಂಚೆ ಮೂಲಕ ಅರ್ಜಿ ಕಳುಹಿಸುವವರಿಗೆ ಕಚೇರಿಯಿಂದ ಕಳುಹಿಸಬೇಕಾಗಿರುವ ರಂಗ ಕೈಪಿಡಿ ಅಂಚೆ ವೆಚ್ಚ ರೂ. 30 ನ್ನು ಒಳಗೊಂಡ ಮೊತ್ತದ ಡಿ.ಡಿ. ಸಲ್ಲಿಸಲಾಗುತ್ತದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದಿಂದ 10 ದಿನಗಳೊಳಗೆ ಸಂದರ್ಶನದ ದಿನಾಂಕವನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗುತ್ತದೆ ಹಾಗೂ ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುತ್ತದೆ. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು.

Also Read  ಬೆಳ್ತಂಗಡಿ : ಸ್ವಂತ ಅಣ್ಣನಿಂದಲೇ ದೌರ್ಜನ್ಯಕ್ಕೆ ಒಳಗಾದ ತಂಗಿ ➤ ಏಳು ತಿಂಗಳ ಗರ್ಭಿಣಿಯಾದ ಬಾಲಕಿ..!!

ಪ್ರತಿ ವರ್ಷದಂತೆ ಗರಿಷ್ಠ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುತ್ತದೆ. ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ. ಕೋವಿಡ್ ನಿರ್ಬಂಧಗಳ ಹಿನ್ನೆಲೆಯಲ್ಲಿ ಸರ್ಕಾರವು ಹೊರಡಿಸುವ ಮಾರ್ಗಸೂಚಿಗಳನ್ನು ಅನುಸರಿಸಿ ಈ ಕೋರ್ಸ್ ಆರಂಭವಾಗುವ ದಿನಾಂಕ ಮತ್ತು ಮುಕ್ತಾಯಗೊಳ್ಳುವ ದಿನಾಂಕವನ್ನು ನಿಗದಿಗೊಳಿಸಲಾಗುವುದು. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ 0821-2512639, 9448938661, 9916600027 ಮತ್ತು 9448422343 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Also Read  ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

error: Content is protected !!
Scroll to Top