ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು .01. ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ. ಅವರು ಸೋಮವಾರ ನಿರ್ಗಮನ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರಿಂದ ಅಧಿಕಾರ ವಹಿಸಿಕೊಂಡರು.

ಗ್ರಾ.ಪಂ. ಸದಸ್ಯ ತೋಮಸ್ ಕೆ.ಜೆ., ಸಿಬಂದಿಗಳು ಉಪಸ್ಥಿತರಿದ್ದರು. ಪಿಡಿಒ ಆನಂದ ಎ. ಸ್ವಾಗತಿಸಿ, ಧನರಾಜ್ ವಂದಿಸಿದರು.

Scroll to Top