ಕರಾವಳಿಯಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.01: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ,ಶಿವಮೊಗ್ಗ, ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

Scroll to Top