(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಯಾವುದೇ ದ್ವಿಚಕ್ರ ವಾಹನಗಳು ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ವಾಹನ ಪ್ರವೇಶಿಸದಂತೆ ಬ್ಯಾರಿಕೇಡ್ ಮೂಲಕ ತಡೆ ನಿರ್ಮಿಸಲಾಗಿದೆ.