(ನ್ಯೂಸ್ ಕಡಬ) newskadaba.com.ಮಂಗಳೂರು, ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಜೋರಾಗುತ್ತಿದೆ. ಸಮುದಾಯಕ್ಕೆ ಹರಡುತ್ತಿದೆ ಎಂಬ ಊಹೆಗಳಿಗೆ ಪೂರಕವೆಂಬಂತೆ ಕೊರೊನಾಗೆ ಮತ್ತೊಂದು ಬಲಿಯಾಗಿದೆ, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಬಲಯಾದವರ ಸಂಖ್ಯೆ 16ಕ್ಕೆ ಏರಿದೆ.
ಮಂಗಳೂರಿನ ಬೆಂಗ್ರೆ ನಿವಾಸಿಯಾಗಿದ್ದ ಪುರುಷ ಸೋಂಕು ಪೀಡಿತ ವ್ಯಕ್ತಿ ಡಯಾಬಿಟಿಸ್ ಮತ್ತು ನ್ಯುಮೋನಿಯಾ ರೋಗದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಮೃತ ಪಟ್ಟ ಬಳಿಕ ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯುವಕ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೆಲ್ಲಾ ಗಮನಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋಗಬಹುದು ಎನ್ನುವ ಪಶ್ನೆ ಸಾರ್ವಜನಿಕರಲ್ಲಿ ಕಾಡತೊಡಗಿದೆ.
