ಗಾಯಕಿ ಎಸ್‌. ಜಾನಕಿ ಆರೋಗ್ಯವಾಗಿದ್ದಾರೆ ➤ ಎಸ್ ಪಿ ಬಿ ಸ್ಪಷ್ಟನೆ 

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.01:ಗಾನಕೋಗಿಲೆ, ಬಹುಭಾಷಾ ಗಾಯಕಿ ಎಸ್‌. ಜಾನಕಿ ನಿಧನರಾಗಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಸ್ಪಷ್ಟನೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಎಸ್‌ ಜಾನಕಿಯವರ ನಿಧನ ಸುದ್ದಿ ಸುಳ್ಳಾಗಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

 

 

ಎಸ್.‌ ಜಾನಕಿಯವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ರಾತ್ರಿಯಿಂದ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಇದೀಗ ಈ ಬಗ್ಗೆ ಎಸ್‌ಪಿಬಿ ಸ್ಪಷ್ಟನೆ ನೀಡಿದ್ದಾರೆ. ಜಾನಕಿ ಅಮ್ಮನವರ ಬಗ್ಗೆ ಸುಳ್ಳು ಸುದ್ದಿ ಹರಿದಾಡಿದ್ದರಿಂದ ಹಲವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಾನು ಅವರಲ್ಲಿ ಮಾತನಾಡಿದ್ದು ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದು ಈ ರೀತಿ ಸುಳ್ಳು ಸುದ್ದಿಯನ್ನು ಹರಡುವವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಾಮಾಜಿಕ ಜಾಲತಾಣವನ್ನು ಸಕಾರಾತ್ಮಕವಾಗಿ ಒಳ್ಳೆಯ ವಿಚಾರಗಳಿಗಾಗಿ ಬಳಸಿ ಈ ರೀತಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Also Read  ಅಪ್ಪಿ ತಪ್ಪಿಯೂ ಗೂಗಲ್ ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಬೇಡಿ...??

 

 

error: Content is protected !!
Scroll to Top