ಮಂಗಳೂರು :ಎಸಿಪಿಗೆ ಕೊರೋನ ಸೋಂಕು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.01:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಸಿಪಿಯೊಬ್ಬರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಗೆ ಕೊರೋನದಿಂದ ಮೃತಪಟ್ಟವರೋರ್ವರ ಅಂತ್ಯಸಂಸ್ಕಾರಕ್ಕೆ ಬೋಳಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿತ್ತು.

 

 

ಈ ಸಂದರ್ಭ ಪೊಲೀಸರು ಸಹಿತ ಹಲವು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮನವೊಲಿಸಿದ್ದರು. ನಂತರ ಅಂತ್ಯಸಂಸ್ಕಾರ ನೆರವೇರಿತ್ತು. ಅಂತ್ಯಸಂಸ್ಕಾರದ ಬಂದೋಬಸ್ತ್‌ನಲ್ಲಿ ಎಸಿಪಿಯವರು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಎಸಿಪಿಯವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕು ಸಮುದಾಯಕ್ಕೆ ಹಬ್ಬುತ್ತಿದ್ದು ಜಿಲ್ಲೆಯನ್ನು ಬೆಚ್ಚಿ ಬೀಳಿಸುತ್ತಿದೆ.

Also Read  ಸುಳ್ಯ: ಮೀಸಲು ಅರಣ್ಯದಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; 30 ಮಂದಿ ವಶ, ಮುಚ್ಚಳಿಕೆ ಬರೆಸಿ ಬಿಡುಗಡೆ

 

error: Content is protected !!
Scroll to Top