ದ.ಕದಲ್ಲಿ ಸಾವಿನ ಸಂಖ್ಯೆ 18ಕ್ಕೇರಿಕೆ ➤ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.02: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ.

 

ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು.ಇನ್ನು ಬುಧವಾರಷ್ಟೇ ಜಿಲ್ಲೆಯಲ್ಲಿ ಕೊರೋನಾ ಮೂರು ಬಲಿ ಪಡೆದುಕೊಂಡಿದೆ.ಇಷ್ಟಾದರೂ ಜನ ಎಚ್ಚೆತ್ತು ಕೊಳ್ಳದೇ ಬೇಕಾ ಬಿಟ್ಟಿಯಾಗಿ ಓಡಾಡ್ತ ಇದ್ದಾರೆ. ಇನ್ನಾದರೂ ಮುಂಜಾಗ್ರತಾ ಕ್ರಮ ವಹಿಸಿಕೊಂಡರೆ ಜೀವಕ್ಕೆ ಒಳಿತು.

Also Read  ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು

 

 

error: Content is protected !!
Scroll to Top