(ನ್ಯೂಸ್ ಕಡಬ) newskadaba.com.ಮಂಗಳೂರು.2: ಬುಧವಾರದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ದ.ಕ.ಜಿಲ್ಲೆಯಲ್ಲಿ 285 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಗೈರಾದರು.
28,161 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಅದರಲ್ಲಿ ,27,876 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಜರಾದವರಲ್ಲಿ ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 46. ನೆರೆರಾಜ್ಯಗಳಿಂದ ಒಟ್ಟು 367 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ದ.ಕ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 13,742 ವಿದ್ಯಾರ್ಥಿಗಳಲ್ಲಿ 795 ಮಂದಿ ಗೈರು ಹಾಜರಾಗಿದ್ದರು. ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಜೋನ್‌ಗಳಿಂದ ಆಗಮಿಸಿದ್ದ 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಬೈಂದೂರು 3, ಕುಂದಾಪುರ 1, ಕಾರ್ಕಳ 3, ಉಡುಪಿ ಉತ್ತರ 2, ಉಡುಪಿ ದಕ್ಷಿಣದ ಓರ್ವ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. 82 ಮಂದಿ ಹೊರ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.