(ನ್ಯೂಸ್ ಕಡಬ) newskadaba.com ಕರಾವಳಿ ,ಜು.02: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2 ಹಾಗೂ 3ರಂದು ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು ಹವಾಮಾನ ಇಲಾಖೆ ” ಆರೆಂಜ್ ಅಲರ್ಟ್” ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ. ಇನ್ನು ಮಂಗಳೂರು ತಾಲ್ಲೂಕಿನಲ್ಲಿ ಗರಿಷ್ಟ 13.6 ಮಿ.ಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ಕಡೆಗಲಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ.