ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್

(ನ್ಯೂಸ್ ಕಡಬ) newskadaba.com.ಮಡಿಕೇರಿ,ಜು.2:  ಕೊರೊನಾ ಕಾರಣದಿಂದ ರೈತರ ಸಾಲ ಮರುಪಾವತಿ ಅವಧಿಯನ್ನು ಎರಡರಿಂದ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ.


ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಹಕಾರ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ತಲಾ 3000 ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮಕ್ಕೆ ಚೆಕ್ ನೀಡುವ ಮೂಲಕ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೋವಿಡ್ ಪರಿಸ್ಥಿತಿ ಇನ್ನೂ ಮುಂದುವರಿದಿರುವ ಕಾರಣ ಸಾಲ ಮರುಪಾವತಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂಬ ಬಗ್ಗೆ ರೈತರಿಂದ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಚರ್ಚಿಸಲಾಗಿದೆ ಇದರೊಂದಿಗೆ ರೈತರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಾಲ ಹೆಚ್ಚಿಸುವ ಮತ್ತು ಸಾಲ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

Also Read  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

 

error: Content is protected !!
Scroll to Top