ಕುಡಿದ ಮತ್ತಿನಲ್ಲಿ ಪತ್ನಿ, ಮಕ್ಕಳಿಗೆ ಬೆಂಕಿಯಿಟ್ಟು ► ಆತ್ಮಹತ್ಯೆಗೆ ಶರಣಾದ ಪತಿ..!!!

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ.7, ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನ ಪತ್ನಿ ಹಾಗು ಮಕ್ಕಳಿಗೆ ಬೆಂಕಿ ಇಟ್ಟು ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನೆಲವಗಿ ಗ್ರಾಮದಲ್ಲಿ ನಡೆದಿದೆ.

ಬಸಪ್ಪ ಎಂಬವರು ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಘಟನೆಯಲ್ಲಿ ಪತ್ನಿ ನಿರ್ಮಲಾ ಮತ್ತು ಮಕ್ಕಳಾದ ಸವಿತಾ ಮತ್ತು ರಾಹುಲ್ ಬದುಕುಳಿದಿದ್ದಾರೆ. ಬೆಂಕಿ ಹಚ್ಚಿಕೊಂಡ ಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪಾನಮತ್ತರಾಗಿದ್ದ ಬಸಪ್ಪ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತನ್ನ ಪತ್ನಿ, ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಪತ್ನಿ, ಮಕ್ಕಳ ಚೀರಾಟದ ಕೇಳಿ ಅಕ್ಕಪಕ್ಕದ ಮನೆಯವರು ಬಂದು ರಕ್ಷಣೆ ಮಾಡಿದ್ದಾರೆ.

Also Read  ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

ಸ್ಥಳೀಯರ ಸಮಯಪ್ರಜ್ಞೆಯಿಂದ ಬಸಪ್ಪನ ಪತ್ನಿ, ಮಕ್ಕಳು ಬದುಕುಳಿದಿದ್ದು, ಗಾಯಾಳುಗಳನ್ನು ಬಾಗಲಕೋಟೆಯ ನವನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಚಾರಣೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲಿಸರು ಪರಿಶೀಲನೆ ನಡೆಸಿದ್ದಾರೆ.

 

error: Content is protected !!
Scroll to Top