ಕರಾವಳಿಯ ಶಾಸಕರಿಗೂ ತಟ್ಟಿದ ಕೊರೋನಾ ಬಿಸಿ ➤ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02. ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸ್ವತಃ ಭರತ್ ಶೆಟ್ಟಿಯೇ ಟ್ವೀಟ್ ಮೂಲಕ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಶಾಸಕರು ಮಂಗಳೂರಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕಾರಣ ಸ್ವಯಂ ಪ್ರೇರಿತವಾಗಿ ಕೊರೊನಾ ತಪಾಸಣೆ ನಡೆಸಿದ ಸಂದರ್ಭ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Also Read  ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

error: Content is protected !!
Scroll to Top