ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತವು ಪ್ರಕಟಣೆ ಹೊರಡಿಸಿದ್ದು, 33.ಕೆ.ವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 04 ಶನಿವಾರ, ಜುಲೈ 07 ಮಂಗಳವಾರ ಹಾಗೂ ಜುಲೈ 09 ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11 ಕೆ.ವಿ. ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪುತ್ತೂರು ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಕಾನೂನು ಪದವೀಧರರ ಶಿಷ್ಯ ವೇತನಕ್ಕೆ- ಅರ್ಜಿ ಆಹ್ವಾನ

error: Content is protected !!
Scroll to Top