(ನ್ಯೂಸ್ ಕಡಬ) newskadaba.com ಮಂಗಳೂರು,ಜು.04: ಜು 4ರಿಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ,ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಹೇಳಿದ್ದಾರೆ.
ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಕೂಡಾ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೇ ಕರಾವಳಿ ಭಾಗದಲ್ಲಿ ವೇಗವಾಗಿ ಗಾಳಿ ಬೀಸುತ್ತಿರುವ ಕಾರಣ ಮೀನುಗಾರರು ಮುಂಜಾಗ್ರತಾ ಕ್ರಮವಾಗಿ ಸಮುದ್ರಕ್ಕೆ ಇಳಿಯುವಂತಿಲ್ಲ ಎಂದಿದ್ದಾರೆ. ಶುಕ್ರವಾರದಂದು, ಉಪ್ಪಿನಂಗಡಿ, ಗೋಕರ್ಣ, ಕಾರವಾರ, , ಪುತ್ತೂರು ಸುಳ್ಯ, ಧರ್ಮಸ್ಥಳ, ಕೋಟ ಮಂಗಳೂರು, ಸೋಮವಾರಪೇಟೆ,ಯಲ್ಲಿ 17 ಸೆಂ.ಮೀ ಗರಿಷ್ಠ ಮಳೆಯಾಗಿದೆ.ಇದರಿಂದ ಜು 4ರಿಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಹೇಳಿದ್ದಾರೆ.