ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯೊಂದಿಗೆ, ಕೊರೊನಾಗೆ ಬಲಿಯಾಗುತ್ತಿರವವ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ.

ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಉಳ್ಳಾಲದ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಇಂದಿನ ಎರಡು ಸಾವು ಪ್ರಕರಣಗಳಿಂದ ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇದರಲ್ಲಿ 22 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ ಇಬ್ಬರು ಸೋಂಕಿತರು ಅನ್ಯ ಕಾರಣದಿಂದ ಮೃತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ ಸೋಂಕಿತರ ಕಂಡುಬಂದಿದ್ದರು. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1234ಕ್ಕೆ ಏರಿಕೆಯಾಗಿದೆ.

Also Read  23ನೇ ವಯಸ್ಸಿಗೆ IFS ಅಧಿಕಾರಿಯಾದ ತಮಾಲಿ ಸಹಾ..!

 

error: Content is protected !!
Scroll to Top