2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ, ಜು.06. ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿರುವ ಹಿನ್ನಲೆಯಲ್ಲಿ ಕೇರಳ ಸರಕಾರ ಸುರಕ್ಷತಾ ಕ್ರಮಗಳ ಪಾಲನೆಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ಭಾನುವಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ.


ಕೇರಳ ಸರ್ಕಾರದ ಈ ಮಹತ್ವದ ಆದೇಶ 2021 ಜುಲೈವರೆಗೂ ಅನ್ವಯವಾಗಲಿದೆ. ಅಲ್ಲದೇ ಇದೇ ವೇಳೆ ಮದುವೆಗೆ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಅಂತ್ಯಕ್ರೀಯೆಯಲ್ಲಿ 20 ಜನರಷ್ಟೆ ಭಾಗವಹಿಸಬೇಕು. ಸಮುದಾಯ ಕಾರ್ಯಕ್ರಮ, ಸಭೆ ಸಮಾರಂಬಗಳನ್ನು ಪೂರ್ವಾನುಮತಿ ಇಲ್ಲದೆ ನಡೆಸುಂತಿಲ್ಲ. ಅಂಗಡಿ ಹಾಗೂ ಮಾರಾಟ ಮಳಿಗೆಗಳಲ್ಲಿ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕೇರಳ ಸರ್ಕಾರಕಟ್ಟುನಿಟ್ಟಾಗಿ ನಿಷೇದಿಸಿದೆ.

Also Read  ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಆದೇಶ ಹೊರಡಿಸಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ 10 ಸಾವಿರ ರೂ ದಂಡ ಇಲ್ಲವೇ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

error: Content is protected !!
Scroll to Top