(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ನಡೆದ ರ್ಯಾಲಿ, ಪ್ರತಿಭಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೋರ್ವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಬೆದರಿಕೆ ಹಾಕಿರುವ ವೀಡಿಯೋ ಇದೀಗ ವೈರಲ್ ಆಗಿದೆ.
ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸ್ ಅಧಿಕಾರಿಯ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದಲ್ಲದೆ ಸಾರ್ವಜನಿಕರ ಎದುರಲ್ಲೇ ಏಕವಚನದಲ್ಲಿ ಅಧಿಕಾರಿಗೆ ಬೆದರಿಕೆ ಹಾಕುತ್ತಿರುವುದು ಕಾಣಬಹುದಾಗಿದೆ.