ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತ್ಯು ಪ್ರಕರಣ ➤ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್, ಪರಿಹಾರ ಘೋಷಿಸಿದ್ದಾರೆ, ಪರಿಹಾರವನ್ನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸೋಮವಾರ ವಿತರಿಸಿದರು.

ನಗರದ ಹೊರವಲಯದ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ಭಾನುವಾರ ಮನೆ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳ ಮೃತಪಟ್ಟ ಪ್ರಕರಣಸಂಕ್ಕೆ ಸಂಬಂಧಿಸಿದಂತೆ   ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾನುವಾ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿ್ ಮೃತಪಟ್ಟ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿ , ಜಿಲ್ಲಾಧಿಕಾರಿಗೆ ಪರಿಹಾರ ಮೊತ್ತ ಹಸ್ತಾಂತರಿಸುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಸೋಮವಾರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ವಿತರಿಸಿದರು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.ಇನ್ನು ಸಂಸದ ನಳಿನ್ ಕುಮಾರ್ ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿರುವ ಅವರು, ಕುಟುಂಬಸ್ಥರ ಅಳಲು ಆಲಿಸಿದರು.

Also Read  ಅತೀ ವೇಗ ಚಾಲನೆ: ಖಾಸಗಿ ಬಸ್ಸೊಂದರ ವಿರುದ್ದ ದೂರು ದಾಖಲು

 

 

error: Content is protected !!
Scroll to Top