ಭಾರತದಲ್ಲಿ 7ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ)newskadaba.com ಎಷ್ಟೇ ಬಿಗಿ ಕ್ರಮ ಕೈಗೊಂಡರೂ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  22,252 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  7,19,665ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2,59,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಕೂಡ 20,000 ಮೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ 467 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೊರೋನಾದಿಂದ ಪ್ರಾಣ ಕಳೆದುಕೊಂಡವ ಸಂಖ್ಯೆ ದೇಶದಲ್ಲಿ 20,160ಕ್ಕೆ ಏರಿದೆ. ಮಹಾರಾಷ್ಟ್ರ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಈಗಲೂ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

Also Read  ಮನ್ ಕಿ ಬಾತ್ ನಲ್ಲಿ ಮೈಸೂರಿನ ಯುವಕನ ಅನುಭವ ಹಂಚಿದ ಪ್ರಧಾನಿ ಮೋದಿ

error: Content is protected !!
Scroll to Top