ಕರಾವಳಿಯಲ್ಲಿ ಇಂದಿನಿಂದ ಜು 11ರ ವರೆಗೆ ಭಾರಿ ಮಳೆ ಸಾಧ್ಯತೆ ➤ ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ,ಜು.07:  ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ.

ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು, ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಸಕಲೇಶಪುರ, ಧರ್ಮಸ್ಥಳ, ಉಪ್ಪಿನಂಗಡಿ, ಕಾರವಾರ ನಲ್ಲಿ ಸೋಮವಾರ ಗರಿಷ್ಠ ಮಳೆಯಾಗಿದೆ ಎಂದು ತಿಳಿಸಿದೆ.

Also Read  ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

 

error: Content is protected !!
Scroll to Top