ವಿಟ್ಲದಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ➤ ಕೊರೋನಾಗೆ ನಲುಗಿದ ಒಂದೇ ಕುಟುಂಬದ ಏಳು ಮಂದಿ

(ನ್ಯೂಸ್ ಕಡಬ) newskadaba.com ವಿಟ್ಲ, ಜು.08. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ
ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಒಂದೇ ಕುಟುಂಬದ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಒಕ್ಕೆತ್ತೂರು 31 ವರ್ಷದ ಯುವಕನಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರ ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಕುಟುಂಬದ ಸದಸ್ಯರೆಲ್ಲರ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು‌. ಬಳಿಕ ಯುವಕನ ಸಹೋದರನಿಗೆ, ಪತ್ನಿ, ಹಾಗೂ ಮತ್ತೊಬ್ಬರು ಮಹಿಳೆ ಸೇರಿದಂತೆ ನಾಲ್ಕು ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಇದೀಗ ಕುಟುಂಬದ ಮತ್ತೆ ಮೂವರ ವರದಿ ಬಂದಿದ್ದು, ಸೋಂಕಿತ ಯುವಕನ ತಂದೆ, ಸಹೋದರಿ ಹಾಗೂ ಅತ್ತಿಗೆಗೆ ಸೋಂಕು ಇರೋದು ದೃಢಪಟ್ಟಿದೆ. ಇದರೊಂದಿಗೆ ಒಂದೇ ಕುಟುಂಬದ ಒಟ್ಟು ಏಳು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

Also Read  ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

error: Content is protected !!
Scroll to Top