ಸುರತ್ಕಲ್: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 24 ಮಂದಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.08, ಇಲ್ಲಿನ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಯುನಿಟ್ ನ 24 ಜನರಿಗೆ ಸೋಂಕು ದೃಢಪಟ್ಟಿದೆ. ಈಗಾಗಲೇ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕವಾಗಿ ಪಸರಿಸುತ್ತಿದ್ದು, ಇದುವರೆಗೆ 1359 ಪ್ರಕರಣ ದಾಖಲಾಗಿ ಇದರ ಪೈಕಿ 650 ಪ್ರಕರಣಗಳು ಸಕ್ರಿಯವಾಗಿದೆ.

ಸುರತ್ಕಲ್ ಪ್ರದೇಶದಲ್ಲಿ ಈವರೆಗೆ ಒಟ್ಟು 33 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಸಿಐಎಫ್ ಯೂನಿಟ್ ನ 25ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಯೂನಿಟ್ ನ್ನು ಜಿಲ್ಲಾಡಳಿತದ ವತಿಯಿಂದ ಸೀಲ್ ಡೌನ್ ಮಾಡಲಾಗಿಲ್ಲದಿದ್ದರೂ ಸುತ್ತಮುತ್ತಲಿನ ಜನರಿಗೆ ಜಾಗೃತರಾಗಿರುವಂತೆ ಸೂಚಿಸಿದೆ. ಸರಕಾರದ ಹೋಂ ಕ್ವಾರಂಟೈನ್ ಚಿಕಿತ್ಸೆಯ ಆದೇಶದಂತೆ ಇವರು ಇರುವಲ್ಲಿಯೇ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಕೈಗೊಳ್ಳುವ ಸಾಧ್ಯತೆಯಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

 

error: Content is protected !!
Scroll to Top