ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.08. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 34ನೇ ನೆಕ್ಕಿಲಾಡಿ ಸಮೀಪ ಮಾರುತಿ ಎಸ್ ಕ್ರಾಸ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಿನಿಮೀಯ ಶೈಲಿಯಲ್ಲಿ ಮುಖ್ಯ ರಸ್ತೆಯಿಂದ ಕೆಳಗಿನ ರಸ್ತೆಗೆ ಇಳಿದ ದೃಶ್ಯ ಗುರುವಾರ ಸಂಜೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಸುತ್ತಿದ್ದರು. ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣದಿಂದ ಕಾರನ್ನು ಹತೋಟಿಗೆ ತರಲು ಸಾಧ್ಯವಾಯಿತೆನ್ನಲಾಗಿದೆ. ಕಾರು ಕೆಳಗಿನ ರಸ್ತೆಗೆ ಬಂದು ನಿಲ್ಲುವ ಕೆಲವೇ ಕ್ಷಣಗಳ ಮೊದಲು ಕೆಳಗಿನ ರಸ್ತೆಯಲ್ಲಿ ನಿಂತಿದ್ದ ಆಮ್ನಿಗಳೆರಡು ತೆರಳಿದ್ದವೆನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!
Scroll to Top