ಜುಲೈ 9 ರಂದು ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.08. ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಮಟ್ಟಹಾಕಲು ಸರ್ಕಾರ ಹಲವು ರೀತಿಯ ಸಾಹಸಗಳನ್ನು ಮಾಡುತ್ತಿದೆ. ಜು.9ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವರು ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 25,000 ಗಡಿ ದಾಟಿದ್ದು, ವೈರಸ್ ಹರಡುವುದನ್ನು ನಿಯಂತ್ರಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರಮುಖ ಆದ್ಯತೆ ನೀಡಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಕೊರೋನಾ ಮಟ್ಟಹಾಕಲು ಸರ್ಕಾರ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದರ ಕುರಿತು ಜನತೆಯಲ್ಲಿ ಕುತೂಹಲ ಮೂಡಿದೆ.

Also Read  ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನಾಲಯವನ್ನು ಈಗಾಗಲೇ ಕೊರೋನಾ ಕೇರ್ ಸೆಂಟರ್ ಆಗಿ ಮಾರ್ಪಡಿಸಲಾಗಿದ್ದು, ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಗಮನಹರಿಸುತ್ತಿದೆ ಎಂದು ತಿಳಿದುಬಂದಿದೆ.

ಈ ನಡುವೆ ಮಾನ್ಸೂನ್ ತಿಂಗಳುಗಳಾದ ಜುಲೈ ಮತ್ತು ಆಗಸ್ಟ್ ನಲ್ಲಿ ಕೊರೋನಾ ಸೋಂಕು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಡಾ.ಸುದರ್ಶನ್ ಬಲ್ಲಾಳ್ ಹಾಗೂ ತಜ್ಞರು ಅಭಿಪ್ರಾಯಪಡುತ್ತಿದ್ದು, ಸರ್ಕಾರಕ್ಕೆ ಮುಂದಿನ ದಿನಗಳು ಸವಾಲಾಗಿ ಪರಿಣಮಿಸಲಿದೆ ಎಂದು ಹೇಳುತ್ತಿದ್ದಾರೆ.

error: Content is protected !!
Scroll to Top