ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ.


ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ ತಂತ್ರಜ್ಞಾನ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಹಾಗೂ ಟಿವಿ ಇಲ್ಲ. ಆದರೆ ಆನ್‍ಲೈನ್ ಕ್ಲಾಸ್‍ಗೆ ಇವೆಲ್ಲದರ ಅಗತ್ಯ ಮಕ್ಕಳಿಗೆ ಇದೆ. ಹೀಗಾಗಿ ಚಿನ್ನಾಭರಣಗಳನ್ನು ಅಡವಿಟ್ಟು ಹಾಗೂ ಹೆಚ್ಚಿನ ಬಡ್ಡಿಗೆ ವೈಯಕ್ತಿಕ ಸಾಲ ಪಡೆಯಲು ಪೋಷಕರು ಮುಂದಾಗಿದ್ದಾರೆ.


ಈ ವಿಚಾರವನ್ನು ಪೋಷಕರು ಬ್ಯಾಂಕಿನಲ್ಲಿ ಹೇಳಿಕೊಂಡು ಸಾಲ ಕೇಳಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಇಂತಹ ಅಗತ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಒತ್ತಾಯಿಸಿದ್ದಾರೆ.

error: Content is protected !!

Join WhatsApp Group

WhatsApp Share