ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 08. ರಾಜ್ಯ ಸರ್ಕಾರ ಘೋಷಿಸಿರುವ 49 ಹೊಸ ತಾಲೂಕುಗಳು 2018ರ ಜನವರಿ ಒಂದರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ಸಂಬಂಧ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೊಸ ತಾಲ್ಲೂಕುಗಳಿಗೆ ತಹಶೀಲ್ದಾರ್ ಕಚೇರಿ ಮತ್ತು ಬೇರೆ ಬೇರೆ ಇಲಾಖೆಗಳ ತಾಲ್ಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
ತಾಲ್ಲೂಕು ಪುನರ್ ರಚನೆ ಸಂಬಂಧ 1973ರಲ್ಲಿ ವಾಸುದೇವ ರಾವ್ ಆಯೋಗ, 84ರಲ್ಲಿ ಟಿ.ಎಂ. ಹುಂಡೇಕರ್, 86ರಲ್ಲಿ ಪಿ.ಸಿ. ಗದ್ದಿಗೌಡರ್, 2007ರಲ್ಲಿ ಎಂ.ಬಿ. ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿಗಳು 40 ತಾಲ್ಲೂಕುಗಳನ್ನು ರಚಿಸುವಂತೆ ಶಿಫಾರಸು ಮಾಡಿದ್ದವು.
ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮತ್ತು ಅಧಿಕಾರ ವಿಕೇಂದ್ರಿಕರಣ ಉದ್ದೇಶದಿಂದ ಇನ್ನೂ ಒಂಬತ್ತು ಹೊಸ ತಾಲ್ಲೂಕುಗಳನ್ನು ಸೇರಿಸಿ, 2017-18ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ 49 ತಾಲೂಕುಗಳನ್ನು ಘೋಷಣೆ ಮಾಡಿತ್ತು. ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾವಕ್ಕೆ ಇತ್ತೀಚೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಹೊಸ ತಾಲ್ಲೂಕುಗಳು
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್,
ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಕಾಗವಾಡ,
ಚಾಮರಾಜನಗರ ಜಿಲ್ಲೆಯ ಹನೂರು,
ದಾವಣಗೆರೆ ಜಿಲ್ಲೆಯ ನ್ಯಾಮತಿ,
ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ,
ಬಳ್ಳಾರಿ ಜಿಲ್ಲೆಯ ಕುರುಗೋಡು, ಕೊಟ್ಟೂರು, ಕಂಪ್ಲಿ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿನಗರ,
ಗದಗ ಜಿಲ್ಲೆಯ ಗಜೇಂದ್ರಗಡ, ಲಕ್ಷ್ಮೇಶ್ವರ,
ಕಲಬುರ್ಗಿ ಜಿಲ್ಲೆಯ ಕಾಳಗಿ, ಕಮಲಾಪೂರ, ಯಡ್ರಾವಿ, ಶಹಾಬಾದ್, ಯಾದಗಿರಿ, ಹುಣಸಗಿ, ವಡಗೇರಾ, ಗುರು ಮಿಟ್ಕಲ್,
ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ, ಕಾರಟಗಿ
ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ,

Also Read  ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಶಂಕಿತ ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್…!

ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ,
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಕಡಬ
ಬೆಂಗಳೂರು ನಗರದ ಯಲಹಂಕ
ವಿಜಯಪುರ ಜಿಲ್ಲೆಯ ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರ ಹಿಪ್ಪರಗಿ, ತಾಳಿಕೋಟೆ, ಚಡಚಣ, ಕೊಲ್ಹಾರ
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ,
ಮೈಸೂರು ಜಿಲ್ಲೆಯ ಸರಗೂರು,
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ
ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನೂತನ ತಾಲೂಕುಗಳನ್ನಾಗಿ ಘೋಷಿಸಲಾಗಿದೆ‌

error: Content is protected !!
Scroll to Top