ನೇತ್ರಾವತಿ ಸೇತುವೆಯಿಂದ ಹಾರಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 08, ಕೆಲವು ದಿನಗಳ ಹಿಂದೆ ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಹರೇಕಳ ಶಾಲೆ ಬಳಿಯ ನಿವಾಸಿ ಕಿಶೋರ್ ಅಡ್ಯಂತಾಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಂದೆಯೊಂದಿಗೆ ವಾಸವಿದ್ದ ಕಿಶೋರ್ ವಾರದ ಹಿಂದೆ ನಾಪತ್ತೆಯಾಗಿದ್ದರು. ಜೀವನದಲ್ಲಿ ಜಿಗುಪ್ಸೆ ಹೊಂದಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ತಡೆಯಲು ಸೇತುವೆಗೆ ಬೇಲಿ ಹಾಕುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದ ದಿನವೇ ಸೇತುವೆ ಬಳಿ ಕೊಡೆ ಪತ್ತೆಯಾಗಿದ್ದು, ಉಳ್ಳಾಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಪೊಲೀಸರು ಸಿಬ್ಬಂದಿಯಿಲ್ಲ ಎಂಬ ಕಾರಣ ನೀಡಿ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ.

Also Read  ಕಡಬ ಸಮುದಾಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ

error: Content is protected !!
Scroll to Top