ಜುಲೈ 20ರ ಸುಮಾರಿಗೆ ಪಿಯು ರಿಸಲ್ಟ್ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.9, ಇತ್ತೀಚೆಗಷ್ಟೇ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವು ಜುಲೈ 20ರ ಸುಮಾರಿಗೆ ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಇವರು, ”ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2ನೇ ಪಿಯು ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ” ಎಂದವರು ತಿಳಿಸಿದ್ದಾರೆ.

error: Content is protected !!
Scroll to Top