ನಡುರಸ್ತೆಯಲ್ಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ಕೊರೋನಾ ರೋಗಿ

(ನ್ಯೂಸ್ ಕಡಬ)newskadaba.com ಬೆಂಗಳೂರು: ಜು.9, ಕೋವಿಡ್‌- 19 ಸೋಂಕಿತ ರೋಗಿಯೊಬ್ಬರು ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಮನಕಲಕುವ ಮತ್ತೊಂದು ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ.

ನಗರದ ಲಗ್ಗೆರೆಯ ಉದಯಗಿರಿ ಪೆಟ್ರೋಲ್‌ ಬಂಕ್‌ ಬಳಿ ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ರಾಜು (56) ಎಂದು ಗುರುತಿಸಲಾಗಿದೆ. ವಾಯುವಿಹಾರದ ವೇಳೆ ದಿಢೀರ್‌ ಕುಸಿದುಬಿದ್ದ ಇವರಿಗೆ ಯಾರೊಬ್ಬರೂ ಸಹಾಯಕ್ಕೆ ಧಾವಿಸದಿರುವುದರಿಂದ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ತದನಂತರ ಪೊಲೀಸರು ಮೃತರ ಗುರುತು ಪತ್ತೆಹಚ್ಚಿ ಕುಟುಂಬಸ್ಥರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮೃತರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಬೆಳಗಿನ ವಾಕಿಂಗ್‌ ವೇಳೆ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಮೃತರ ಪಾರ್ಥಿವ ಶರೀರ ಕೊಂಡೊಯ್ಯಲು ಪೊಲೀಸರು  ಆ್ಯಂಬುಲೆನ್ಸ್‌ಗೆ ಕರೆ ಮಾಡಿ 6 ಗಂಟೆಗಳ ನಂತರ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

Also Read  ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ

error: Content is protected !!
Scroll to Top