?? ?ig Breaking News ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ➤ ವ್ಯಕ್ತಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.9, ಕರ್ತವ್ಯ ನಿರತರಾಗಿದ್ದ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ.

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಮತಾ ಗಟ್ಟಿ ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಮಮತಾ ರವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ತಲೆಗೆ ಹಾಗೂ ಕೈಗೆ ಏಟಾಗಿದೆ. ತತ್ ಕ್ಷಣ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ

error: Content is protected !!
Scroll to Top