ದ.ಕ ಇಂದು 168 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 168 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಸೋಂಕಿತರ ಪ್ರಾಥಮಿಕ ಸಂಪರ್ಕ, ದುಬೈ, ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ನಾಗಾಲೋಟದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

error: Content is protected !!
Scroll to Top