ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಗುರುವಾರದಂದು 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರದಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿತ್ತು.

Also Read  15 ದಿನಗಳಲ್ಲಿ ಮರಳು ಪರವಾನಗಿ ಹಾಗೂ ಅಕ್ರಮ ಗಣಿಗಾರಿಕೆ ಪತ್ತೆಗೆ 196 ಸಿಸಿ ಟಿವಿ ಅಳವಡಿಕೆ ➤ ಸಚಿವ ಸಿ.ಸಿ ಪಾಟೀಲ್

 

error: Content is protected !!
Scroll to Top