ಪರಿಶಿಷ್ಟ ಪಂಗಡ ➤ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡಕ್ಕೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗದವರು ನಿಗದಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10ರಂದು ಕೊನೆಯ ದಿನ.

ಷರತ್ತುಗಳು: ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಕೋಳಿ ಸಾಕಾಣಿಕೆ ಶೆಡ್ ನಿರ್ಮಿಸಲು ಫಲಾನುಭವಿಯ ಹೆಸರಿನಲ್ಲಿ ಸ್ವಂತ ಜಮೀನು ಹೊಂದಿರಬೇಕು ಹಾಗೂ ನೀರಿನ ಸೌಲಭ್ಯ ಹೊಂದಿರಬೇಕು, ವಿದ್ಯುತ್ ಸಂಪರ್ಕ ಹೊಂದಿರಬೇಕು, ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ನಿರಪೇಕ್ಷಣಾ ಪತ್ರ ಪಡೆದಿರಬೇಕು, ಆರೋಗ್ಯ ಹಾಗೂ ಪಶುಸಂಗೋಪನೆ ಇಲಾಖೆಗಳಿಂದ ಅನುಮತಿ ಪತ್ರ ಪಡೆದಿರಬೇಕು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು, ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಯಾವುದೇ ಯೋಜನೆಯಡಿ ಈ ಹಿಂದೆ ಯಾವುದೇ ಇಲಾಖೆ ಮತ್ತು ನಿಗಮದಿಂದ ಯಾವುದೇ ಯೋಜನೆಯಡಿ ಸೌಲಭ್ಯವನ್ನು ಪಡೆದಿರಬಾರದು, ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ನೀಡಬೇಕು, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹೊಂದಿರಬೇಕು, ಘಟಕವೆಚ್ಚ ರೂ. 5.50 ಲಕ್ಷಗಳಾಗಿದ್ದು, ಶೇ.75%ರಷ್ಟು ಸಹಾಯಧನವನ್ನು ಇಲಾಖಾವತಿಯಿಂದ ನೀಡಲಾಗುವುದು. ಉಳಿದ ಶೇ.25% ರಷ್ಟು ಅನುದಾನವನ್ನು ಫಲಾನುಭವಿಯು ಭರಿಸಬೇಕು ಅಥವಾ ಬ್ಯಾಂಕ್‍ಗಳಿಂದ ಪಡೆಯಲು ಬದ್ಧನಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆ ತಿಳಿಸಿದೆ.

Also Read  ಚಿಕ್ಕಮಗಳೂರು:ಪಶ್ಚಿಮಘಟ್ಟದಲ್ಲಿ ನಕ್ಸಲರಿಗೆ ಬೆಂಬಲವಾಗಿದ್ದ ಇಬ್ಬರು ಪೊಲೀಸ್ ವಶಕ್ಕೆ

error: Content is protected !!
Scroll to Top