ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.10:  ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್‌ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ.


ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ವರ್ಷದ ಜನವರಿಯಿಂದ ಸುಮಾರು 10 ಮನವಿ ಪತ್ರ ಸಲ್ಲಿಸಿದ್ದರೂ ಕೂಡ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯುವ ಪ್ರಸ್ತಾಪವನ್ನೂ ಸರಕಾರ ಮುಂದಿಟ್ಟಿಲ್ಲ ಎಂದು ಅವರು ಆರೋಪಿಸಿದ್ದಾರೆ.

Also Read  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

ಇದರಿಂದಾಗಿ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಇಳಿಯುತ್ತಿದ್ದಾರೆ. ಕೊರೊನಾದ ಸಂದರ್ಭದಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯದ ಬಗ್ಗೆ ವಿಚಾರಿಸುತ್ತ ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರು ಇಂದು ಎಲ್ಲಡೆ ಪ್ರತಿಭಟನೆ ಮಾಡುತ್ತಿದ್ದಾರೆ.

 

error: Content is protected !!
Scroll to Top