ಜುಲೈ 13ರಂದು ಬ್ಯಾರಿ ಅಕಾಡೆಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಜುಲೈ 13 ರಂದು ಬೆಳಿಗ್ಗೆ 11 ಗಂಟೆಗೆ ಪುಸ್ತಕ ಮತ್ತು ಸಿಡಿ ಬಿಡುಗಡೆ ಸಮಾರಂಭವನ್ನು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ ಸಾರ್ ಪುಸ್ತಕ ಮತ್ತು ಸಿಡಿಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ವಹಿಸಲಿದ್ದಾರೆ. ಕೊರೋನ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ತಿಳಿಸಿದ್ದಾರೆ.

Also Read  ಉಳ್ಳಾಲ: ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ ➤ ವಿದ್ಯಾರ್ಥಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು

error: Content is protected !!
Scroll to Top